ಬಾಗಲಕೋಟೆ, ): ಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರೋಧ ವ್ಯಕ್ತಪಡಿಸಿದ್ದಾರೆ.
ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ. ವೀರಶೈವ ಮಹಾಸಭಾದವರು ಆಯಾ ಉಪಜಾತಿಗಳ ಸಮಾಜಿಕ ಸೌಲಭ್ಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಮೂಗು ತೂರಿಸುವುದು ಸರಿಯಲ್ಲ. ಈ ನಿರ್ಣಯವನ್ನು ಪುನರ್ ಪರಿಶೀಲಿಸಬೇಕು ಎಂದು ಸಲಹೆಯನ್ನು ಮಹಾಸಭೆಗೆ ಕೊಡಲು ಇಚ್ಚಿಸುತ್ತೇನೆ ಎಂದಿದ್ದಾರೆ.