Breaking News

ನೆಲಮಂಗಲದ ಉದ್ಭವ ಗಣೇಶ ಜಾತ್ರೆಯಲ್ಲಿ ಪುಂಡರ, ಮಂಗಳಮುಖಿಯರ ಹಾವಳಿ; ರೋಸಿಹೋದ ವ್ಯಾಪಾರಿಗಳು

Spread the love

ನೆಲಮಂಗಲ, : ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯನೆಲಮಂಗಲ(Nelamangal) ಪಟ್ಟಣದಲ್ಲಿ ನಡೆಯುವ ಐತಿಹಾಸಿಕ ಉದ್ಭವ ಗಣೇಶ (Lord Ganesh) ಜಾತ್ರೆಯಲ್ಲಿ ಪುಂಡರ ಹಾವಳಿಯಿಂದ ಅಂಗಡಿಕಾರರು ರೋಸಿ ಹೋಗಿದ್ದಾರೆ. ​​ಹೌದು ಪುಂಡರು ರೌಡಿಶೀಟರ್ ರಂಗ ಅಲಿಯಾಸ್​​​ ಗಣೇಶನ ಗುಡಿ ರಂಗ ಹೆಸರಿನಲ್ಲಿ ಜಾತ್ರೆಯಲ್ಲಿ ವ್ಯಾಪಾರಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದರು. ಈ ವಿಚಾರ ತಿಳಿದ ನೆಲಮಂಗಲ ಟೌನ್ ಠಾಣೆ ಪೊಲೀಸರು ಸ್ಥಳೀಯರ ನೆರವಿನಿಂದ ಆರೋಪಿಗಳನ್ನು ವಶಕ್ಕೆ ಪಡೆದರು. ನೆಲಮಂಗಲ ಟೌನ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಪುಂಡರು ಜಾತ್ರೆಯಲ್ಲಿ ಯುವತಿಯರು ಕಂಡರೇ ಪೀಪಿ ಊದಿ ಕರ್ಕಶ ಶಬ್ದ ಮಾಡಿ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದರು. ಈ ರೀತಿ ಉಪಟಳ ನೀಡುತ್ತಾ ವಿಕೃತ ಆನಂದ ಪಡೆಯುತ್ತಿದ್ದರು. ಹೀಗಾಗಿ ಪುಂಡರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.ಮತ್ತೊಂದಡೆ ಮಂಗಳಮುಖಿಯರ ಉಪಟಳ ಮಿತಿಮೀರಿದೆ. ಹೌದು ಮಂಗಳಮುಖಿಯರು ಕೂಡ ವ್ಯಾಪಾರಿಗಳ ಬಳಿ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡದಿದ್ದರೇ ಬಟ್ಟೆ ಎತ್ತಿ ತೋರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಹಣ ಕೊಡದ ಅಂಗಡಿಯಲ್ಲಿನ ಸಾಮಾನುಗಳನ್ನ ಎತ್ತಿ ಬಿಸಾಡುತ್ತಿದ್ದರು. ಈ ಮಂಗಳಮುಖಿಯರ ಕೈಯಿಂದ ತಪ್ಪಿಸಿಕೊಳ್ಳಲು ವ್ಯಾಪಾರಿಗಳು ಸೆಣಸಾಡಿದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ