ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ…
ಬೆಂಗಳೂರು: ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಮತ್ತು ಪಕ್ಷದ ಘನತೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳನ್ನು ಸಹಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಬುಧವಾರ ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 40,000 ಕೋಟಿ ರೂಪಾಯಿ ಕೋವಿಡ್ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ ನಂತರ ರಾಜೀವ್ ಈ ಹೇಳಿಕೆ ನೀಡಿದ್ದಾರೆ.
ವಿಜಯೇಂದ್ರಯತ್ನಾಳ್ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜೀವ್, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಇಂದು ನಡೆದ ಕರ್ನಾಟಕ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದಲ್ಲಿನ ಇತ್ತೀಚಿನ ಎಲ್ಲಾ ಬೆಳವಣಿಗೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಗಿದೆ. ಈ ಬಗ್ಗೆ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. “ಒಳಗಡೆ ನಡೆದ ಚರ್ಚೆಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ.
Laxmi News 24×7