ಕಲಬುರಗಿ: ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ಭಾವಿಸಿದ್ದೆವು.
ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳುವ ಮೂಲಕ ತನಿಖೆಗೆ ನೆರವಾಗಿದ್ದಾರೆ ಎಂದು ಗೃಹ ಪರಮೇಶ್ವರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಹಗರಣದ ತನಿಖೆ ನಡೆಸಲಿದ್ದಾರೆ. ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು.
ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಅವರು ಹೇಳಿದರು.
Laxmi News 24×7