ದರ್ಶನ್ ನಟನೆಯ ‘ಕಾಟೇರ’ ಬಿಡುಗಡೆಗೆ ಇನ್ನೊಂದು ದಿನ ಮಾತ್ರ ಬಾಕಿಯಿದೆ. ಅಭಿಮಾನಿಗಳು ಸಿನಿಮಾ ನೋಡಲು ಥಿಯೇಟರ್‌ಗಳನ್ನು ‘ಕಾಟೇರ’ ದರ್ಶನ್ ಸ್ವಾಗತಕ್ಕೆ ಕಾಯುತ್ತಿದ್ದಾರೆ. ಚಿತ್ರದ ಅಡ್ವಾನ್ಸ್ ಬುಕ್ಕಿಂಗ್‌ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.
ಕೆಲವೆಡೆ ಮಧ್ಯರಾತ್ರಿಯಿಂದಲೇ ಸಿನಿಮಾ ಪ್ರದರ್ಶನ ಆರಂಭವಾಗಲಿದೆ.
‘ಕಾಟೇರ’ ಚಿತ್ರದ ಟ್ರೈಲರ್, ಸಾಂಗ್ಸ್ ರಿಲೀಸ್ ಆಗಿ ಹಿಟ್ ಆಗಿದೆ. ಚಿತ್ರತಂಡ ಭರ್ಜರಿ ಪ್ರಮೋಷನ್ ಮಾಡ್ತಿದೆ. ನಟ ದರ್ಶನ್ ಕೂಡ ಸಂದರ್ಶನಗಳಲ್ಲಿ ಭಾಗಿಯಾಗಿ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ‘ರಾಜ ವೀರಮದಕರಿ ನಾಯಕ’ ಸಿನಿಮಾ ನಿಂತು ಹೋಗಲು ಕಾರಣ ಏನು ಎನ್ನುವುದನ್ನು ತಿಳಿಸಿದ್ದಾರೆ.