2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ.
ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಸ್ಪರ್ಧೆ ನಡೆಯಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಗುರುವಾರ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಂಡ ನಂತರ ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅಶ್ವತ್ಥ ನಾರಾಯಣ್, ಕರ್ನಾಟಕದ ಜನರು ಎರಡನೇ ಆಲೋಚನೆಯಿಲ್ಲದೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ ಎಂದರು.