ಬೆಂಗಳೂರು, (ಡಿಸೆಂಬರ್ 28): ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದ್ದಂತೆಯೇ ಕರ್ನಾಟಕದಲ್ಲಿ ಬಿಜೆಪಿ ಸಿದ್ಧತೆ ಆರಂಭಿಸಿದೆ.
ಇದಕ್ಕೆ ಪೂರಕವೆಂಬಂತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ನಿನ್ನೆ(ಡಿಸೆಂಬರ್ 27) ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ಇಂದು (ಡಿಸೆಂಬರ್ 28) ವಿಜಯೇಂದ್ರ ನೇತೃತ್ವದ ಹಿರಿಯ ಬಿಜೆಪಿ ನಾಯಕರ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆಗಳು ನಡೆದಿವೆ.
ಅಲ್ಲದೇ ಈ ಸಭೆಯಲ್ಲೂ ಸಹ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಬಗ್ಗೆ ಪ್ರಸ್ತಾಪವಾಗಿದ್ದು, ಯತ್ನಾಳ್ ಹೇಳಿಕೆಗಳಿಗೆ ಬ್ರೇಕ್ ಹಾಕಲು ಹೈಕಮಾಂಡ್ ಮೊರೆ ಹೋಗುವುದು ಒಳಿತು ಎನ್ನುವ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.