Breaking News

ವರ್ಣಶಿಲ್ಪಿ, ಜಾನಪದ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟ

Spread the love

ಬೆಂಗಳೂರು: ರಾಜ್ಯ ಸರ್ಕಾರ ನೀಡುವ 2022-23 ಮತ್ತು 2023-24ನೇ ಸಾಲಿನ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟಿಸಿದ್ದು, ಎಂಟು ಮಂದಿ ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ 5 ಲಕ್ಷ ನಗದು ಒಳಗೊಂಡಿವೆ.

 

‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ಗೆ ಮೈಸೂರಿನ ಜಿ.ಎಲ್.ಎನ್.ಸಿಂಹ ಮತ್ತು ಕಲಬುರಗಿಯ ಬಸವರಾಜ ಎಲ್. ಜಾನೆ, ‘ಜಕಣಾಚಾರಿ ಪ್ರಶಸ್ತಿ’ಗೆ ಕಲಬುರಗಿಯ ಮಹದೇವಪ್ಪ ಎಲ್.ಶಿಲ್ಪಿ ಮತ್ತು ಚಿಕ್ಕಮಗಳೂರಿನ ಎಸ್.ಪಿ. ಜಯಣ್ಣಾಚಾರ್, ಜಾನಪದ ಶ್ರೀ ಪ್ರಶಸ್ತಿಗೆ ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (ಯಕ್ಷಗಾನ), ಬೀದರ್‌ನ ಕಲ್ಲಪ್ಪ ಮಿರ್ಜಾಪುರ (ರಿವಾಯತ್ ಪದಗಳು), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (ವೀರಗಾಸೆ) ಹಾಗೂ ಚಿತ್ರದುರ್ಗದ ಹಲಗೆ ದುರ್ಗಮ್ಮ (ಹಲಗೆ ವಾದನಲಾವಣಿ ಪದಗಳು) ಆಯ್ಕೆಯಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಕಲಾವಿದ ವಿ.ಟಿ. ಕಾಳೆ ಅಧ್ಯಕ್ಷತೆಯ ಸಮಿತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಜಕಣಾಚಾರಿ ಪ್ರಶಸ್ತಿಯನ್ನು ಜ.1ರಂದು ನಡೆಯುವ ವಿಶ್ವಕರ್ಮ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಪ್ರದಾನ ಮಾಡಲಾಗುವುದು. ಉಳಿದ ಪ್ರಶಸ್ತಿಗಳನ್ನು ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ತಿಂಗಳಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ