Breaking News

ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಕ್ಯಾಮೆರಾ, ವಾಚ್‌ಟವರ್‌ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!

Spread the love

ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಬೆಂಗಳೂರು: ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ.
2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಬಹಳಷ್ಟು ಜನರು ಕಾತುರರಾಗಿದ್ದು, ಪ್ರತೀ ವರ್ಷದಂತೆಯೇ ಈ ವರ್ಷವೂ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಗಳಿವೆ.
ಈ ಹಿನ್ನೆಲೆಯಲ್ಲಿ ಈ ಹಿಂದೆ ಚರ್ಚ್ ಸ್ಟ್ರೀಟ್ ನಲ್ಲಿ ಸಂಭವಿಸಿದ ಸ್ಫೋಟ, ದೌರ್ಜನ್ಯದಂತಹ ಅಹಿತಕರ ಘಟನೆಗಳು ಸಂಭವಿಸದಂತೆ ಮಾಡಲು ಕ್ಯಾಮೆರಾ, ವೀಕ್ಷಣಾ ಗೋಪುರ (ವಾಚ್ ಟವರ್)ಗಳನ್ನು ಸ್ಥಾಪಿಸಿ ಭದ್ರತೆಗಳ ಹೆಚ್ಚಿರುವಂತೆ ವ್ಯಾಪಾರಿಗಳು ಹಾಗೂ ಅಂಗಡಿ ಸಂಘಗಳು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಬ್ರಿಗೇಡ್ ಶಾಪ್ಸ್ ಆಯಂಡ್ ಎಸ್ಟಾಬ್ಲಿಷ್ ಮೆಂಟ್ ಅಸೋಸಿಯೇಷನ್ ಕಾರ್ಯದರ್ಶಿ ಸುಹೇಲ್ ಯೂಸುಫ್ ಮಾತನಾಡಿ, ಬಿಗಿ ಪೊಲೀಸ್ ನಿಯೋಜನೆಗಾಗಿ ಕೇಂದ್ರ ಡಿಸಿಪಿಗೆ ಪತ್ರದ ಮೂಲಕ ಮನವಿ ಮಾಡಿಕೊಳ್ಳಲಾಗಿದೆ. ನಮ್ಮ ಸಂಘದಿಂದ ಕ್ಯಾಮೆರಾ, ವಾಟ್ ಟವರ್ ಗಳನ್ನು ಅಳವಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ