ಮೃತ ವ್ಯಕ್ತಿಯನ್ನು ಬನ್ನಿ ಮುಕೋಡ್ಲು ನಿವಾಸಿ ರಾಮಚಂದ್ರಯ್ಯ (50) ಎಂದು ಗುರ್ತಿಸಲಾಗಿದೆ. ದನಗಳನ್ನು ಮೇಯಿಸಲು ಕರೆದುಕೊಂಡು ಹೋಗುತ್ತಿದ್ದಾಗ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆದರೆ, ಎರಡು ದಿನಗಳ ಹಿಂದೆಯೇ ಸಾವನ್ನಪ್ಪಿರುವಂತೆ ತೋರುತ್ತಿದೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.
ಸ್ಥಳೀಯರು ನೀಡುವ ಮಾಹಿತಿ ಪ್ರಕಾರ, ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟಿದ್ದಾನೆಂದು ಹೇಳುತ್ತಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದೇವೆ. ಅರಣ್ಯ ಪ್ರದೇಶದ ಗಡಿಯಲ್ಲಿ ಘಟನೆ ನಡೆದಿದೆ. ಆನೆ ದಾಳಿಯಿಂದಲೇ ವ್ಯಕ್ತಿ ಮೃತಪಟ್ಟಿರುವುದು ದೃಢಪಟ್ಟರೆ ಮೃತನ ಕುಟುಂಬಸ್ಥರಿಗೆ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಹೊಸಕೂರಿನ ಗಟ್ಟಹಳ್ಳಿಯಲ್ಲಿ ಪ್ರತ್ಯಕ್ಷವಾದ ಚಿರತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಚಿರತೆ ಕಾಣಿಸಿಕೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಕಂಡುಬಂದಿವೆ. ಈ ಪ್ರದೇಶವು ಅರಣ್ಯ ಪ್ರದೇಶಕ್ಕೆ ಸಮೀಪವಾಗಿರುವುದರಿಂದ ಚಿರತೆ ದೂರ ಹೇಗಿರುವ ಸಾಧ್ಯತೆ ಇದೆ. ಆದರೆ, ಸುರಕ್ಷತಾ ಕ್ರಮವಾಗಿ ಬೋನನನ್ನು ಇರಿಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.