ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ. ಮುಂಬೈ: ಮುಂಬರುವ ಲೋಕಸಬಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಶಿವಸಂಕಲ್ಪ ಅಭಿಯಾನವನ್ನು ಘೋಷಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ‘ಶಿವಸಂಕಲ್ಪ ಅಭಿಯಾನ’ದ ಭಾಗವಾಗಿ ರಾಜ್ಯದ 48 ಕ್ಷೇತ್ರಗಳಲ್ಲಿ ಪ್ರವಾಸ ಮಾಡುವುದಾಗಿ ಘೋಷಿಸುವ ಮೂಲಕ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಗುರುವಾರ ಚಾಲನೆ ನೀಡಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಿಂದೆ, 2024ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವಂತೆ ಮನವಿ ಮಾಡಿದರು. 2024ರ ಮೊದಲಾರ್ಧದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸುವಂತೆ ಹೇಳಿದರು.ಶಿವಸೇನೆ (ಏಕನಾಥ ಶಿಂದೆ ಬಣ), ಭಾರತೀಯ ಜನತಾ ಪಕ್ಷ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್ಸಿಪಿ) ಅಜಿತ್ ಪವಾರ್ ಬಣವನ್ನು ಒಳಗೊಂಡಿರುವ ಆಡಳಿತಾರೂಢ ಮೈತ್ರಿಕೂಟ ಅಥವಾ ‘ಮಹಾಯುತಿ’ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.