ಬೆಂಗಳೂರು:- ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಕೊಬ್ಬರಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಮೋದಿ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳು ಹಾಗೂ ಅಭಿನಂದನೆಗಳು.
ಮಿಲ್ಲಿಂಗ್ ಕೊಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ. ಏರಿಕೆ ಮಾಡಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ
ಡಿಸೆಂಬರ್ 21ರಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರ ನೇತೃತ್ವದಲ್ಲಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬ್ಬರಿ ರೈತರ ಸಂಕಷ್ಟ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮಾನ್ಯ ಪ್ರಧಾನಿಗಳು ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದರು ಎಂದಿದ್ದಾರೆ ಅವರು.
Laxmi News 24×7