ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಮಬನೂರ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ಹಾಗೂ ಶ್ರೀ ಕರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಗ್ರಾಮ ಪಂಚಾಯಿತಿ ಸದಸ್ಯ ಮಹಾದೇವ ಪಟಾತ , ವಿಠ್ಠಲ ಪಟಾತ, ನಿಂಗಪ್ಪಾ ನರಿ, ಬಸಪ್ಪಾ ಪಟಾತ, ಸಂಗಪ್ಪಾ ಪಟಾತ, ಕರೆಪ್ಪ ಪಟಾತ, ಪುಂಡಲಿಕ ಮೇಟಿ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.