Breaking News

ಪ್ರತಾಪ್‌ ಸಿಂಹನ ಸಹೋದರ ಬಂಧನ!

Spread the love

ಬೆಂಗಳೂರು: ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರತಾಪ್‌ ಸಿಂಹ (Pratap Simha) ಅವರ ಸಹೋದರ ವಿಕ್ರಂ ಸಿಂಹನನ್ನು (Vikram Simha) ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಕಡಿಯಲಾಗಿತ್ತು.

ಈ ಸಂಬಂಧ ಬೇಲೂರು ಆರ್‌ಎಫ್‌ಒ ಜಮೀನಿನ ಮಾಲೀಕರಾದ ಜಯಮ್ಮ, ರಾಕೇಶ್‌ ಶೆಟ್ಟಿ, ವಿಕ್ರಂ ಸಿಂಹ ಹಾಗೂ ಇತರರ ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ವಿಕ್ರಂ ಸಿಂಹನನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಕ್ರಂ ಸಿಂಹ ಬೆಂಗಳೂರು ಜಾರಿಬಂಡೆ ಕಾವಲ್‌ನ ಅರಣ್ಯ ಘಟಕದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್‌ ಸಿಂಹ ಹಾಗೂ ಸಹೋದರನ ವಿರುದ್ಧ ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿತ್ತು. ಅಣ್ಣ ಪ್ರತಾಪ್‌ ಸಿಂಹ ನಾಡಕಳ್ಳ, ತಮ್ಮ ವಿಕ್ರಂ ಸಿಂಹ ಕಾಡುಗಳ್ಳ ಎಂದು ಕಾಂಗ್ರೆಸ್‌ ಲೇವಡಿ ಮಾಡಿತ್ತು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ