Breaking News

ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; 6 ಮಂದಿ ಸಜೀವ ದಹನ

Spread the love

ಮುಂಬೈ: ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ. ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಒಳಗೆ ಇನ್ನಷ್ಟು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಘಟನೆ ನಡೆದ ವೇಳೆ ಕಾರ್ಖಾನೆ ಒಳಗೆ 10-15 ಮಂದಿ ಕಾರ್ಮಿಕರಿದ್ದರು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುತ್ತಿವೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ