Breaking News

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ

Spread the love

ಬೆಳಗಾವಿ, : ಬೆಳಗಾವಿ ( Belagavi ) ತಾಲೂಕಿನ ವಂಟಮೂರಿ ಗ್ರಾಮದಲ್ಲಿಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ( Belagavi City Police ) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ.

ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು.

ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. ಈ ವೇಳೆ ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರವನ್ನು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರು ಜಹಾಂಗೀರ್ ಎಂಬುವವರಿಗೆ ನೀಡಿ ಗೌರವಿಸಿದರು. ಮೂವರಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ವಿತರಿಸಲಾಯಿತು.

ಇನ್ನು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ ಘಟನೆ ತಡೆದ ಕಾಕತಿ ಠಾಣೆಯ ಪಿಎಸ್‌ಐ ಮಂಜುನಾಥ್ ಹುಲಕುಂದ ಸೇರಿ ಆರು ಜನ ಸಿಬ್ಬಂದಿಗೂ ಸನ್ಮಾನಿಸಲಾಯಿತು.


Spread the love

About Laxminews 24x7

Check Also

ಫೆ.8ರಿಂದ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Spread the loveಬೆಳಗಾವಿ:ನಗರದ ಕೆಎಲ್‌ಎಸ್ ಗೊಗಟೆ ಕಾಲೇಜಿನ ಕೆ.ಕೆ.ವೇಣುಗೋಪಾಲ ಸಭಾಂಗಣದಲ್ಲಿ ಫೆ.8ರಿಂದ 13ರ ವರಗೆ ಅಕಾಡೆಮಿ ಆಫ್ ಕಂಪೇರೆಟಿವ್ ಫಿಲಾಸಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ