Breaking News

ಕಾಟೇರ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್​ ಜೋಶಿ

Spread the love

ಹುಬ್ಬಳ್ಳಿಯಲ್ಲಿ ಪ್ರಲ್ಹಾದ್​ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಸಾಥ್​ ನೀಡಿದ್ದಾರೆ. ದರ್ಶನ್​ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್​ ಜೋಶಿ ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ.

ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ‘ಕಾಟೇರ‘ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್​ (Darshan) ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರು ಈ ಸಿನಿಮಾದಲ್ಲಿ ಸಾಮಾಜಿಕ ಸಂದೇಶ ನೀಡಿದ್ದಾರೆ. ಜನ ಸಾಮಾನ್ಯರು ಮಾತ್ರವಲ್ಲದೇ ರಾಜಕಾರಣಿಗಳು ಕೂಡ ‘ಕಾಟೇರ’ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಕೂಡ ಇಂದು (ಡಿ.31) ‘ಕಾಟೇರ’ ಸಿನಿಮಾ ವೀಕ್ಷಿಸಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಚಿತ್ರ ಅವರಿಗೆ ತುಂಬ ಇಷ್ಟವಾಗಿದೆ.

ಹುಬ್ಬಳ್ಳಿಯಲ್ಲಿ ಪ್ರಲ್ಹಾದ್​ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಸಾಥ್​ ನೀಡಿದ್ದಾರೆ. ದರ್ಶನ್​ ಅವರ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್​ ಜೋಶಿ ಅವರು ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ