Breaking News
Home / Uncategorized / ನಮ್ಮ ಮೇಲೆ ನಡೆದಿರುವ ದೌರ್ಜನ್ಯಕ್ಕೆ ನ್ಯಾಯ ಬೇಕಿದೆ : ಚಾಂದಿನಿ ನಾಯ್ಕ್

ನಮ್ಮ ಮೇಲೆ ನಡೆದಿರುವ ದೌರ್ಜನ್ಯಕ್ಕೆ ನ್ಯಾಯ ಬೇಕಿದೆ : ಚಾಂದಿನಿ ನಾಯ್ಕ್

Spread the love

ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪುರಸಭೆ ಸದಸ್ಯೆರನ್ನು ಎಳೆದಾಡಿ, ಗೂಂಡಾ ಪ್ರವೃತ್ತಿ ಪ್ರದರ್ಶಿಸಿದ್ದ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ವಿರುದ್ಧ ಸದಸ್ಯೆ ಚಾಂದಿನಿ ನಾಯ್ಕ್ ಕಣ್ಣೀರಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಸದಸ್ಯೆ ಚಾಂದಿನಿ ನಾಯ್ಕ್, ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಲು ತೆರಳಿದ್ದೆವು. ಈ ವೇಳೆ ನಮಗೆ ಮತ ಚಲಾಯಿಸಲು ಅವಕಾಶ ನೀಡದೆ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಘಟನೆ ನಡೆಯುವ ಮುನ್ನವೇ ನಮಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೆವು. ಆದರೆ ಅವರು ಯಾವುದೇ ರಕ್ಷಣೆ ನೀಡಲು ಮುಂದಾಗಲಿಲ್ಲ. ಶಾಸಕರು ಹಾಗೂ ಅವರ ಬೆಂಬಲಿಗರು ನಮ್ಮನ್ನು ಹಿಡಿದು ಎಳೆದಾಡಿ, ಮೆಟ್ಟಿಲು ಮೇಲಿನಿಂದ ತಳ್ಳಿ ತುಳಿದಾಡಿದ್ದರು. ಘಟನೆಯಿಂದ ಮಾಸಿಕವಾಗಿ, ದೈಹಿಕವಾಗಿ ನೋವಾಗಿದ್ದು, ನಮ್ಮ ಮೇಲೆ ನಡೆದಿರುವ ದೌರ್ಜನ್ಯಕ್ಕೆ ನ್ಯಾಯ ಬೇಕಿದೆ ಎಂದರು.

ಪ್ರಧಾನಿ ಮೋದಿ ಅವರು ಮೋದಿ ಭೇಟಿ ಬಚಾವೋ ಎಂದು ಹೇಳುತ್ತಾರೆ. ಆದರೆ ಈ ರೀತಿ ಶಾಸಕರು ನಡೆದುಕೊಳ್ಳುತ್ತಾರಾ? ಚುನಾವಣೆಯ ಸಂದರ್ಭದಲ್ಲಿ ನಮ್ಮನ್ನು ಯಾರು ಕಿಡ್ನಾಪ್ ಮಾಡಿಲ್ಲ. ದಲಿತ ಸದಸ್ಯೆಯಾಗಿ ನನಗೆ ಅನ್ಯಾಯವಾಗಿತ್ತು. ಆದ್ದರಿಂದಲೇ ನಾನು ಪುರಸಭೆ ಸದಸ್ಯೆ ಸವಿತಾ ಹುರಕಡ್ಲಿ ಅವರಿಗೆ ಬೆಂಬಲ ನೀಡಲು ಮುಂದಾಗಿದ್ದೆ. ಆದರೆ ನಮಗೆ ಮತ ಚಲಾಯಿಸಲು ಅವಕಾಶ ನೀಡದೆ ಚುನಾವಣೆ ನಡೆಸಿದ್ದಾರೆ. ಜನರು ನಮ್ಮನ್ನು ಆಯ್ಕೆ ಮಾಡಿದ್ದರು ನಮಗೆ ಯಾವುದೇ ಅವಕಾಶ ಲಭಿಸಿಲ್ಲ ಎಂದು ಕಣ್ಣೀರಿಟ್ಟರು.


Spread the love

About Laxminews 24x7

Check Also

ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

Spread the love ಚಿಕ್ಕಮಗಳೂರು: ಸರ್ಕಾರಿ ಜಾಗದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು ರಾತ್ರೋ ರಾತ್ರಿ 50 ಮಂದಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ