Breaking News

ರಾಜ್ಯದಲ್ಲಿ ಕೋವಿಡ್ ಹೆಚ್ಚಳ

Spread the love

ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ ಬೆಂಗಳೂರು: ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಈ ಸಂಬಂಧ ಆರೋಗ್ಯ ಇಲಾಖೆ ಪ್ರಧಾನ ಕರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ಬಂದಾಗ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಅಗತ್ಯವಿದೆ.
ಹಾಗಾಗಿ ಕೋವಿಡ್ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಿದ್ದಾರೆ. ರಾಜ್ಯ ಸಚಿವ ಸಂಪುಟ ಉಪಸಮಿತಿ (ರಾಜ್ಯ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ) ಸಭೆ ನಿರ್ದೇಶನದಂತೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಎಚ್ – ಬ್ಲಾಕ್, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸರ್ ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ ಕೋವಿಡ್ ವಾರ್ಡ್ಗಳನ್ನು ಕಾಯ್ದಿರಿಸಲು ಸೂಚಿಸಿದ್ದಾರೆ.
ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಹಾಗೂ ತುರ್ತು ನಿಗಾ ಘಟಕದಲ್ಲಿ 5 (ಐಸಿಯು) ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚನೆ ನೀಡಿದ್ದಾರೆ.

Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ