ರಾಮನಗರ : ಡೈರಿ ಕಾರ್ಯದರ್ಶಿ ನೇಮಕ ವಿಚಾರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿ ಮುಂದುವರೆದಿದ್ದು, ರಾಮನಗರ ತಾಲೂಕಿನ ಅಣ್ಣಹಳ್ಳಿಯ ಗ್ರಾಮಸ್ಥರ ಪ್ರತಿಭಟನೆ ತಾರಕಕ್ಕೇರಿದೆ.
ಇಂದು ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಹತ್ತಾರು ಕ್ಯಾನ್ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾರ್ಯದರ್ಶಿ ನೇಮಕ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಹೆದ್ದಾರಿಯಲ್ಲಿ ಹಸು ಕಟ್ಟಿ, ರಸ್ತೆ ತಡೆದು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಬಮೂಲ್ ನಿರ್ದೇಶಕ ಪಿ. ನಾಗರಾಜು ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಕಾರ್ಯದರ್ಶಿ ಬದಲಾವಣೆ ಮಾಡುವಂತೆ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ. ರಸ್ತೆಯಲ್ಲೇ ಮಲಗಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7