ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಬ್ಬ ಶ್ರೀರಾಮ. ಮತ್ತೆ ಯಾಕೆ ಅಲ್ಲಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು ಎಂದು ಮಾಜಿ ಸಚಿವ ಹೆಚ್. ಆಂಜನೇಯ ಪ್ರಶ್ನಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲ.
ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು ಎಂದು ಕುಟುಕಿದ್ದಾರೆ.
ಸ್ವತಃ ಸಿದ್ಧರಾಮಯ್ಯ ಅವರೇ ಶ್ರೀರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ದರಾಮನ ಹುಂಡಿಯಲ್ಲಿ ಶ್ರೀರಾಮನ ದೇವಸ್ಥಾನ ಇದೆ, ಅಲ್ಲಿ ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ, ಬಿಜೆಪಿ ಅವರನ್ನು ಕರೆಸಿಕೊಂಡು ಭಜನೆ ಮಾಡುತ್ತಾರೆ ಎಂದು ರಾಮಮಂದಿರ ಉದ್ಘಾಟನೆ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.
ರಾಮ, ಆಂಜನೇಯನಮ್ಮವರ್ಗಕ್ಕೆಸೇರಿದವರು
ನಮ್ಮ ರಾಮ ಎಲ್ಲಾ ಕಡೆಗೂ ಇದ್ದಾನೆ, ನಾನು ಆಂಜನೇಯ. ನಾವೆಲ್ಲಾ ಶ್ರೀರಾಮನ ಭಕ್ತರು. ನಮ್ಮ ಸಮುದಾಯದವರು ರಾಮ, ಆಂಜನೇಯ, ಹನುಮಂತ ಹೆಸರಿಟ್ಟುಕೊಳ್ಳುತ್ತಾರೆ. ರಾಮ, ಆಂಜನೇಯ ನಮ್ಮ ವರ್ಗಕ್ಕೆ ಸೇರಿದವರು. ಬಿಜೆಪಿ ಅವರದ್ದು ಧರ್ಮಗಳನ್ನು ಒಡೆದಾಳುವ ನೀತಿ ಎಂದು ಆಂಜನೇಯ ಕಿಡಿಕಾರಿದ್ದಾರೆ.