Breaking News

ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಪುಂಡರು ಅಟ್ಟಹಾಸ

Spread the love

ಬೆಳಗಾವಿ, ಜನವರಿ 02: ಸಿನಿಮೀಯ ರೀತಿಯಲ್ಲಿ ಗ್ರಾಮಕ್ಕೆ ನುಗ್ಗಿ ಪುಂಡರು ಅಟ್ಟಹಾಸ ಮೆರೆದಿರುವ ಘಟನೆಬೆಳಗಾವಿ(Belagavi) ತಾಲೂಕಿನ ನಾವಗೆ ಗ್ರಾಮದಲ್ಲಿ ಸೋಮವಾರ (ಜ.01) ರಾತ್ರಿ ನಡೆದಿದೆ. ಪ್ರಕರಣ ಸಂಬಂಧ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು (Police) 6 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಬಂದೂಕು, ತಲ್ವಾರ್, ರಾಡ್​​​​​​ಗಳ ಸಮೇತ ಬಂದಿದ್ದ 30ಕ್ಕೂ ಹೆಚ್ಚು ಮುಸುಕುಧಾರಿಗಳು ಗ್ರಾಮದ ನಾಲ್ಕು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಮಾಡಿದ್ದಾರೆ. ಇದರಿಂದ ಮನೆಯ ಕಿಟಕಿ ಗಾಜುಗಳು, ಗೋಡೆಗೆ ಅಂಟಿಸಿದ್ದ ಟೈಲ್ಸ್ ಪುಡಿ ಪುಡಿಯಾಗಿವೆ. ಅಲ್ಲದೆ ಮನೆ ಮುಂದೆ ನಿಲ್ಲಿಸಿದ್ದ ಮೂರು ಕಾರು, ಆರು ಬೈಕ್ ಜಖಂಗೊಳಿಸಿದ್ದಾರೆ. ಈ ಮುಸುಕುಧಾರಿಗಳು ಮಾಜಿ ಮತ್ತು ಹಾಲಿ ಗ್ರಾಮ ಪಂಚಾಯತಿ ಸದಸ್ಯರ ಮನೆ ಮೇಲೂ ದಾಳಿ ಮಾಡಿದ್ದಾರೆ.

 

ಡಿಸೆಂಬರ್​​ 31ರ ರಾತ್ರಿ ಪ್ರೀತಿ ವಿಚಾರವಾಗಿ ಬಾದರವಾಡಿ ಮತ್ತು ನಾವಗೆ ಗ್ರಾಮದ ಯುವಕರ ನಡುವೆ ಗಲಾಟೆ ನಡೆದಿದೆ. ಈ ನಾವಗೆ ಗ್ರಾಮದ ಮುಖಂಡರು ಮತ್ತು ಪಂಚರು ಮಧ್ಯಪ್ರವೇಶಿಸಿ, ಯುವಕರಿಗೆ ಎರಡೇಟು ನೀಡಿ ಜಗಳ ಬಿಡಿಸಿದ್ದರು. ಇದಾದ ಬಳಿಕ ನಾವಗೆ ಗ್ರಾಮದ ಯುವಕರು ಬಾದರವಾಡಿ ಯುವಕರಿಗೆ ನಿಮ್ಮನ್ನು ನೋಡಿಕೊಳ್ಳುವುದಾಗಿ ವಾರ್ನಿಂಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಾದರವಾಡಿ ಗ್ರಾಮದ ಯುವಕರು ನಾವಗೆ ಗ್ರಾಮಕ್ಕೆ ನುಗ್ಗಿ ದಾಂದಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪುಂಡರ ಅಟ್ಟಹಾಸ ಕಂಡು ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಇಬ್ಬರು ಎಸಿಪಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ