ಬೆಳಗಾವಿ, ಜ.1: ತಾಳಿ ಕಟ್ಟುವ ಸಮಯದಲ್ಲಿ ಮದುವೆ ಮುರಿದು ಬಿದ್ದ ಘಟನೆಬೆಳಗಾವಿ (Belagavi)ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ. ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಳೆ ಹುಬ್ಬಳ್ಳಿ ನಿವಾಸಿ ವರ ಸಚಿನ್ ಪಾಟೀಲ್ ಎಂಬವನೊಂದಿಗೆ ಯುವತಿಯೊಬ್ಬಳ ಮದುವೆ ನಿಶ್ಚಯವಾಗಿತ್ತು. ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪ ಕೂಡ ಬುಕ್ ಮಾಡಲಾಗಿತ್ತು. 2023ರ ಡಿಸೆಂಬರ್ 30 ರಂದು ನಡೆದ ಮದುವೆ ನಿಶ್ಚಿತಾರ್ಥ ಸಂದರ್ಭದಲ್ಲಿ 100 ಗ್ರಾಂ ಚಿನ್ನ, 10 ಲಕ್ಷ ವರದಕ್ಷಿಣೆ ನೀಡುವ ಮಾತುಕತೆ ನಡೆದಿತ್ತು.
ಆದರೆ, ವರದಕ್ಷಿಣೆ ನೀಡದ ಹಿನ್ನೆಲೆಯಲ್ಲಿ ತಾಳಿ ಕಟ್ಟಲು ವರ ಸಚಿನ್ ಒಲ್ಲೆ ಎಂದಿದ್ದಾನೆ. ಇದರಿಂದ ಬೆಸತ್ತ ವಧುವಿನ ಕುಟುಂಬಸ್ಥರು ಖಾನಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವರನ ವಿರುದ್ಧ ವಧು ನೀಡಿದ ದೂರಿನ ಅನ್ವಯ ಪೊಲೀಸರು, ಸಚಿನ್ ಪಾಟೀಲ್ನನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.
Laxmi News 24×7