Breaking News

Ram Mandir ಲೋಕಾರ್ಪಣೆಗೆ ನನಗೂ ಆಹ್ವಾನವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Spread the love

ವಿಜಯಪುರ: ಅಯೋಧ್ಯಾ ರಾಮ ಮಂದಿರ ಲೋಕಾರ್ಪಣೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರವಲ್ಲ ದೇಶದಲ್ಲಿ ಬಿಜೆಪಿ ಆಡಳಿತ ಇರುವ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಿಲ್ಲ. ಭಾರತ ಸರ್ಕಾರದ ಸಚಿವನಾಗಿರುವ ನನಗೂ ಆಹ್ವಾನವಿಲ್ಲ. ನನ್ನನ್ನು ಕರೆಯುವ ಮಾತಿರಲಿ, ಬರಬೇಡವೆಂದೂ ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

 

ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಯಾರನ್ನು ಆಹ್ವಾನಿಸಬೇಕು ಎಂಬುದನ್ನು ರಾಮ ಮಂದಿರ ಸಮಿತಿ ನಿರ್ಧರಿಸುತ್ತದೆ. ಈ ವಿಷಯದಲ್ಲಿ ಅವರು ಸ್ವತಂತ್ರರು ಎಂದರು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲವೆಂದು ಎಂದು ಆರೋಪಿಸಿರುವ ಮಾಜಿ ಸಚಿವ ಆಂಜನೇಯ ಅವರಿಗೆ ಸದ್ಬುದ್ದಿ ಬರಲಿ ಎಂದು ಕುಟುಕಿದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ