Breaking News

ಮಹಿಳೆಯರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ:BSY

Spread the love

ಬೆಂಗಳೂರು,ನ.11-ಮಹಿಳೆಯರು ನಿರ್ಭೀತಿಯಿಂದ ಜೀವನ ಸಾಗಿಸಲು ನಮ್ಮ ಸರ್ಕಾರ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿ ಇಂದು ನಿರ್ಭಯ ಯೋಜನೆಯಡಿ ಪೊಲೀಸ್ ಠಾಣೆಗಳಿಗೆ 751 ದ್ವಿಚಕ್ರ ವಾಹನಗಳನ್ನು ಹಸ್ತಾಂತರ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಮಹಿಳೆಯರಿಗೆ ಅತ್ಯಂತ ಸುರಕ್ಷಿತ ತಾಣವಾಗಿದೆ. ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ನಾವು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು. ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ನಿರ್ಭಯ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಾಗರಿಕ ಸಮಾಜದಲ್ಲಿ ಮಹಿಳೆ ನಿರ್ಭೀತಿಯಿಂದ ಇರಬೇಕು. ಇದಕ್ಕಾಗಿ ನಾವು ಎಲ್ಲ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ