Breaking News

‘ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಯತ್ನಾಳರಿಗೆ ಎಚ್ಚರಿಕೆ ನೋಟೀಸ್ ನೀಡಲಾಗದಷ್ಟು ಬಿಜೆಪಿ ನಿರ್ವೀರ್ಯ’

Spread the love

ಬೆಂಗಳೂರು: ಸುಮಾರು ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ.

ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು.

ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ