Breaking News

ಸಿದ್ದರಾಮಯ್ಯ ಅವರನ್ನ ನಿತ್ಯಾನಂದನಿಗೆ ಹೋಲಿಸಿದ ಬಿ.ಕೆ ಹರಿಪ್ರಸಾದ್!

Spread the love

ಬೆಂಗಳೂರು: ನಿತ್ಯಾನಂದನಿಗೆ ಹೇಗೆ ಭಕ್ತರಿದ್ದಾರೆಯೋ ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೂ ಭಕ್ತರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ (BK Hariprasad) ವ್ಯಂಗ್ಯವಾಡಿದರು.

ಮಾಜಿ ಸಚಿವ ಹೆಚ್. ಆಂಜನೇಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ಭಕ್ತರು ಇರುತ್ತಾರೆ.

ಕೈಲಾಸದ ನಿತ್ಯಾನಂದ ಸ್ವಾಮೀಜಿಗೂ ಭಕ್ತರಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಭಕ್ತರಿದ್ದಾರೆ. ಅದನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದರು.

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರವನ್ನು ಸಮರ್ಥಿಸಿಕೊಂಡ ಹರಿಪ್ರಸಾದ್, 30 ವರ್ಷ ಹಿಂದಿನ ಪ್ರಕರಣವನ್ನು ಈಗ ಯಾಕೆ ಕೆದಕಿದ್ದಾರೆ ಎಂಬುದು ಪ್ರಶ್ನೆಯೇ ಅಲ್ಲ. ಅಂಥವರನ್ನು ಇಷ್ಟು ವರ್ಷ ಬಂಧಿಸದೆ ಬಿಟ್ಟಿದ್ದೇ ತಪ್ಪು. ತಪ್ಪೆಸಗಿದ್ದರೆ ಕ್ರಮ ಕೈಗೊಳ್ಳಬೇಕು. ಅಪರಾಧಿಗಳು ಎಂದಿದ್ದರೂ ಅಪರಾಧಿಗಳೇ. ಬಿಜೆಪಿಯ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಅವರ ಮೇಲೂ ಕೇಸ್ ಇತ್ತು. ಕರಸೇವಕ ಎಂದ ಮಾತ್ರಕ್ಕೆ ಅಪರಾಧ ಪ್ರಕರಣ ಎದುರಿಸುತ್ತಿರುವವರನ್ನೆಲ್ಲ ಬಿಟ್ಟುಬಿಡಲಾಗದು ಎಂದು ಹೇಳಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ