ವಿಜಯಪುರ: ಬಜೆಟ್ ಗಿಂತ ಹೆಚ್ಚು ಹಣ ಖರ್ಚು ಮಾಡಿ ರಾಜ್ಯವನ್ನು ಲೂಟಿ ಮಾಡಿರುವವರು ಈಗ ರಾಮ (ram) ರಾಜ್ಯದ ಬಗ್ಗೆ ಮಾತನಾಡುತ್ತಾರೆ. ಇಂತವರಿಂದ ನಾವು ಕಲಿಯೋದು ಏನಿದೆ ಎಂದು ಕೈಗಾರಿಕ ಸಚಿವ ಎಂ. ಬಿ. ಪಾಟೀಲ್ (m.b. patil) ಹೇಳಿದರು.
ವಿಜಯಪುರದಲ್ಲಿ (vijaypura) ಕೆಡಿಪಿ ಸಭೆಗೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಲ್ವಾಮಾ (pulwama), ಬಾಲಾಕೋಟ್ (balkot) ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದ ಬಿಜೆಪಿ (bjp) ಈಗ ರಾಮನ ಹೆಸರನ್ನು ಬಳಸಿಕೊಂಡು ರಾಜಕೀಯ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.
ಎಲ್ಲ ಜಾತಿ, ಧರ್ಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇದೆ. ಜನರ ಬಗ್ಗೆ ಕಾಳಜಿ ಇರುವುದಕ್ಕೆ ಜನರು ಸಿದ್ದರಾಮಯ್ಯ (siddaramaiah) ಅವರನ್ನು ಎರಡು ಬಾರಿ ಮುಖ್ಯಮಂತ್ರಿ (cm) ಮಾಡಿದ್ದಾರೆ ಎಂದರು.
ಮಟ್ಕಾ ಸೇರಿದಂತೆ 18 ಪ್ರಕರಣಗಳು ದಾಖಲಾಗಿರುವ ಹುಬ್ಬಳ್ಳಿ ಹಿಂದೂ ಕಾರ್ಯಕರ್ತನ ಬಂಧನವನ್ನು ವಿರೋಧಿಸಿ ಬಿಜೆಪಿ ಹೋರಾಟ ನಡೆಸುತ್ತಿದೆ. ರೌಡಿಶೀಟರ್ ನನ್ನು ಬೆಳೆಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ಆರೋಪಿಸಿದರು.