Breaking News

ಮೂರನೇ ಬಾರಿ ಇಡಿ ವಿಚಾರಣೆ ತಪ್ಪಿಸಿಕೊಂಡ ಸಿಎಂ ಕೇಜ್ರಿವಾಲ್‌..!

Spread the love

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ(Delhi) ಮದ್ಯ ಹಗರಣ (Liquor scam)ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ(ED) ವಿಚಾರಣೆಗೆ ಸಿಎಂ ಅರವಿಂದ ಕೇಜ್ರಿವಾಲ್‌ ಮೂರನೇ ಬಾರಿ ಗೈರಾಗಿದ್ದಾರೆ. ಅಬಕಾರಿ ನೀತಿ ಪ್ರಕರಣ ಸಂಬಂಧ 2023ರ ಡಿಸೆಂಬರ್ 22ರಂದು ಇಡಿ ವಿಚಾರಣೆಗೆ ಹಾಜರಾಗುವಂತೆ ಮೂರನೇ ಬಾರಿ ಸಮನ್ಸ್‌ ಜಾರಿ ಮಾಡಿತ್ತು.

ಆದರೆ ಇಂದೂ (ಜ.3) ಕೂಡ ವಿಚಾರಣೆಗೆ ಗೈರಾಗಿದ್ದಾರೆ.

 

 

ಈ ಬಗ್ಗೆ ಆಮ್‌ ಆದ್ಮಿ ಪಕ್ಷ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು , ಇಡಿ ನೊಟೀಸ್‌ ಕಾನೂನುಬಾಹಿರ ಮತ್ತು ದುರುದ್ದೇಶದಿಂದ ಕೂಡಿದೆ ಎಂದು ಹೇಳಿದ್ದಾರೆ. ಜಾರಿ ನಿರ್ದೇಶನಾಲಯದ ವಿಚಾರಣೆಗೆ ಸಹಕರಿಸಲು ಅರವಿಂದ ಕೇಜ್ರಿವಾಲ್ ಸಿದ್ಧರಿದ್ದಾರೆ, ಆದರೆ ಅವರನ್ನು ಬಂಧಿಸುವ ಉದ್ದೇಶದಿಂದ ನೊಟೀಸ್‌ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಜೊತೆಗೆ ಅರವಿಂದ ಕೇಜ್ರಿವಾಲ್‌ ಕೂಡ ಇಡಿಗೆ ಪತ್ರ ಬರೆದಿದ್ದು ಒಂದಷ್ಟು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

‘ನನ್ನ ಹಿಂದಿನ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೇ ಮತ್ತೆ ಒಂದೇ ರೀತಿಯ ನೊಟೀಸ್‌ ನೀಡಿದ್ದಕ್ಕೆ ಕಾರಣ ನೀಡಿ, ಜೊತೆಗೆ ನೊಟೀಸ್‌ ನನಗೆ ಸಿಗುವ ಮೊದಲೇ ಮಾಧ್ಯಮಕ್ಕೆ ತಿಳಿಯುತ್ತಿರುವುದು ಅನುಮಾನ ಹುಟ್ಟಿಸಿದೆ ಎಂದು ಅವರು ಬರೆದಿದ್ದಾರೆ ಜೊತೆಗೆ ರಾಜ್ಯಸಭಾ ಚುನಾವಣೆ ಮತ್ತು ಗಣರಾಜ್ಯೋತ್ಸವದ ಹಿನ್ನೆಲೆ ಅನೇಕ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟ‌ರ್ ಭವಿಷ್ಯ ನುಡಿದಿದ್ದಾರೆ.

Spread the love ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ