Breaking News

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : BSF, CISF, ಪೊಲೀಸ್, ಅಬಕಾರಿ ನೇಮಕಾತಿಗೆ ದೈಹಿಕ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್‌ ಡೇಟ್

Spread the love

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಮನಗರ, ಬೆಳಗಾವಿ ದಾವಣಗೆರೆ, ಕಲಬುರುಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ರಕ್ಷಣಾ/ ಏಕರೂಪದ ಸೇವೆಗಳಿಗೆ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ಕುರಿತಾದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

 

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಅಲ್ಪ ಸಂಖ್ಯಾತರ ಸಮುದಾಯದ (ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ರಾಮನಗರ, ಬೆಳಗಾವಿ ದಾವಣಗೆರೆ, ಕಲಬುರುಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ರಕ್ಷಣಾ/ ಏಕರೂಪದ ಸೇವೆಗಳಿಗೆ ಪೂರ್ವ ನೇಮಕಾತಿ ದೈಹಿಕ ಕೌಶಲ್ಯದ ಕುರಿತಾದ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಸೇನೆ, ವಾಯುಪಡೆ, ನೌಕಾಪಡೆ, ಸಿಐಎಸ್‌ಎಫ್, ಬಿಎಸ್ ಎಫ್, ಆರ್‌ಪಿಎಫ್‌, ಪೊಲೀಸ್, ಅಬಕಾರಿ ಇತ್ಯಾದಿ ರಕ್ಷಣಾ/ ಏಕರೂಪದ ಸೇವೆಗಳಿಗೆ 60ದಿನಗಳ ಪೂರ್ವ ನೇಮಕಾತಿ ದೈಹಿಕ ಕಾಶಲ್ಯದ ತರಬೇತಿ ಇದಾಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ. ಮೀರಿರಬಾರದು. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರಲಿದೆ.www.dom.karnataka.gov.inವೆಬ್‌ಸೈಟ್ ಮೂಲಕ ಜ.5ರೊಳಗೆ ಅರ್ಜಿ ಸಲ್ಲಿಸಬಹುದು.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ