Breaking News

ಅರಣ್ಯ ಭೂಮಿʼಯಲ್ಲಿ ʻಕೃಷಿʼ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ʻಹಕ್ಕುಪತ್ರʼ ವಿತರಣೆ

Spread the love

ಬೆಂಗಳೂರು : ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ.

ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ