Breaking News

ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ ವೈರಲ್ ಮಾಡುತ್ತೇನೆ: ಪತ್ನಿಗೆ ಬೆದರಿಕೆ ಹಾಕಿದ ಪತಿ

Spread the love

ಬೆಳಗಾವಿ, ಜ.4: ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ವೈರಲ್ ಮಾಡುತ್ತೇನೆ ಎಂದು ತನ್ನ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆಬೆಳಗಾವಿ (Belagavi)ನಗರದಲ್ಲಿ ನಡೆದಿದೆ. ಮತ್ತೊಂದು ಮದುವೆಯಾಗಲು ಹೆಂಡತಿಯಿಂದ ವಿಚ್ಛೇದನ ಪಡೆಯಲು ಈ ರೀತಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಬೆಳಗಾವಿ ನಗರದ ನಿವಾಸಿ ಕಿರಣ್ ಪಾಟೀಲ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ಮತ್ತೊಬ್ಬ ಮಹಿಳೆಯನ್ನು ಮದುವೆಯಾಗಲು ಮುಂದಾಗಿದ್ದನು. ಇದಕ್ಕಾಗಿಯೇ ವಿಚ್ಛೇದನ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೆ, ಖಾಸಗಿ ಕ್ಷಣದ ವಿಡಿಯೋ, ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದನು.

ಗಂಡನ ಬೆದರಿಕೆಯಿಂದ ಭೀತಿಗೊಂಡ ಪತ್ನಿ ಸಾಕಷ್ಟು ಬಾರಿ ಮನವೊಲಿಸಲು ಯತ್ನಿದರೂ ಪ್ರಯೋಜನವಾಗಿಲ್ಲ. ಪತಿ ಕಿರಣ್ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದನು. ಅಷ್ಟಕ್ಕೂ ಸುಮ್ಮನಾಗದ ಆತ, ಪತ್ನಿಗೆ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುವುದನ್ನು ಮುಂದುವರಿಸಿದ್ದನು.

ಇದರಿಂದ ದಿಕ್ಕೆ ತೋಚದಂತಾದಾಗ ಮಹಿಳೆ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾಳೆ. ಜಿಲ್ಲಾ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಿರಣ್​ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಆತನ ಮೊಬೈಲ್​ನಲ್ಲಿ ಪತ್ನಿಯ ಅಶ್ಲೀಲ ವಿಡಿಯೋ, ಫೋಟೋ ಇರುವುದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ