ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ.
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಆಡಳಿತರೂಢ ಕಾಂಗ್ರೆಸ್ ಗೆ 2024 ರ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನಾದರೂ ಗೆಲ್ಲಲು ಕಾಂಗ್ರೆಸ್ ಹೈಕಮಾಂಡ್ ಮಾಸ್ಟರ್ ಪ್ಲಾನ್ ಹಾಕಿಕೊಂಡಿದೆ.
ಮುಂಬರುವ ಲೋಕಸಭೆ ಚುನಾವಣೆ ಹಾಗೂ ಭಾರತ್ ನ್ಯಾಯ ಯಾತ್ರೆಗಾಗಿ ಪಕ್ಷದ ಸಿದ್ಧತೆ ಕುರಿತು ಚರ್ಚಿಸಲು ಕಾಂಗ್ರೆಸ್ ಮಹತ್ವದ ಸಭೆ ನಡೆಸುತ್ತಿದೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಈ ಸಭೆಯ ಅಧ್ಯಕ್ಷತೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಲಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಕರೆದಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದು, ರಾಜ್ಯದಲ್ಲಿ ಸಚಿವರು ಹಾಗೂ ಅವರ ಕುಟುಂಬ ಸದಸ್ಯರನ್ನು ಕಣಕ್ಕಿಳಿಸುವ ಪ್ರಮುಖ ವಿಷಯದ ಕುರಿತು ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆ ಇದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ.
ಆದರೆ ಪಕ್ಷವು ರಾಜ್ಯದಲ್ಲಿ 10-12 ಸ್ಥಾನ ಗೆಲ್ಲು ಸಾಧ್ಯತೆಯಿದೆ ಎಂದು ರಾಜಕೀಯ ತಜ್ಞರು ಅಭಿಮತವಾಗಿದೆ, ಸದ್ಯ ಕಾಂಗ್ರೆಸ್ ಪಕ್ಷ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿದೆ.