ಬೆಂಗಳೂರು: ಜನರು ತಮ್ಮ ಆಸ್ತಿಗಳ ಖಾತೆ ವಿಚಾರ, ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳ ಸಮಸ್ಯೆ ಹೊತ್ತು ತರುತ್ತಾರೆ. ಅಧಿಕಾರಿಗಳು ಲಂಚ ಕೇಳಿ ಹಿಂಸೆ ಕೊಟ್ಟಾಗ ಜನ ನಮ್ಮತ್ತ ಬರುತ್ತಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಇವುಗಳನ್ನು ತಪ್ಪಿಸಬೇಕು. ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ನೀಡಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ.
ಶಿವಕುಮಾರ್ (DK Shivakumar) ಸೂಚಿಸಿದರು.
ಯಲಹಂಕದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರೇ ಆಗಲಿ ನನ್ನ ಹೆಸರು, ಕೃಷ್ಣ ಭೈರೇಗೌಡ, ವಿಶ್ವನಾಥ್, ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸೇರಿದಂತೆ ಯಾರ ಹೆಸರಲ್ಲಿ ಹಣ ಕೇಳಿದರೂ ನಮ್ಮ ಗಮನಕ್ಕೆ ತನ್ನಿ, ನಾವು ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.