Breaking News

ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ:H.D.D.

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುವುದು ನಿಶ್ಚಿತ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇವೇಗೌಡರು, ಕಳೆದ 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ನನಗೇ ಇವರು ಹೇಳ್ತಾರೆ. ಇವತ್ತು ಹೇಳ್ತೀನಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ. ನಾವು ಸೋಲಿಸಿಯೇ ಸೋಲಿಸ್ತೀವಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ಅಂತ್ಯ ಕಾಣುತ್ತೆ ಎಂದರು.

)​ಇದೇ ವೇಳೆ ಹಿಂದೂ ಕಾರ್ಯಕರ್ತರ ವಿರುದ್ಧ ಕರ್ನಾಟಕ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮದ ಬಗ್ಗೆ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿ, ರಾಜ್ಯ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಎನ್ಡಿಎ ಸೋಲಿಸಿ 20 ಸ್ಥಾನಗಳನ್ನು ಗೆಲ್ಲುವ ಕನಸು ಕಾಣುತ್ತಿದ್ದಾರೆ. ಆದರೆ ಅವರ ಕನಸು ಕನಸಾಗಿಯೇ ಉಳಿಯುತ್ತದೆ ಎಂದರು. ”ರಾಜ್ಯದಲ್ಲಿ ಈ ಬಾರಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಾವು ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ.

ಜನಾದೇಶ ನಮ್ಮ ಪರವಾಗಿದೆ” ಎಂದು ದೇವೇಗೌಡ ಅವರು ಹೇಳಿದ್ದಾರೆ. ಸೀಟು ಹಂಚಿಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾವು ಕಾಂಗ್ರೆಸ್ ಅನ್ನು ಸೋಲಿಸಬೇಕು. ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ