Breaking News

ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸಚಿವ ಸಂಪುಟ ಒಪ್ಪಿಗೆ

Spread the love

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024 ಮಂಡನೆಗೆ ಸಚಿವ ಸಂಪುಟ (Cabinet Meeting) ಅನುಮೋದನೆ ನೀಡಿದ್ದು, ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ಕಡ್ಡಾಯವಾಗಿ ಕನ್ನಡ ಅಳವಡಿಸಲು ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

 

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆದ ಬಳಿಕ ಕಾನೂನು ಸಚಿವ ಎಚ್‌.ಕೆ..ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಯೋಜನೆಯಲ್ಲಿ 5491 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪ್ಯಾಕ್ಸ್‌ಗಳ) Data Digitization and Migration Support ಕಾರ್ಯವನ್ನು ರೂ. 71.38 ಕೋಟಿಗಳ ಮೊತ್ತದಲ್ಲಿ ಪೂರ್ಣಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ

2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು KPSC ಹೊರಡಿಸುವ ಅಧಿಸೂಚನೆಯಲ್ಲಿ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ (One time measure) ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮಾಡಲು ಒಪ್ಪಿಗೆ ನೀಡಿದ್ದೇವೆ. ಕೋವಿಡ್ ನಿಂದ ಆಗಿರುವ ಪರಿಣಾಮ ವಯೋಮಿತಿಯನ್ನ ಸಡಿಲಿಕೆ ಮಾಡಿ ನಿರ್ಣಯ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಬಿವಿಬಿ ಎಂಜಿನಿಯರಿಂಗ್ ಮಹಾವಿದ್ಯಾಲಯ, ಹುಬ್ಬಳ್ಳಿ, ಇಲ್ಲಿನ ಅನುದಾನಿತ ಬೋಧಕ, ಬೋಧಕೇತರ ಸಿಬ್ಬಂದಿಯ ಸೇವೆಯನ್ನು ಕೆ.ಎಲ್.ಇ ತಾಂತ್ರಿಕ ವಿವಿ ಅನುದಾನಿತ ವಿಭಾಗಗಳಿಗೆ ಮುಂದುವರೆಸುವ ತೊಂದರೆಯಾಗದಂತೆ ಸ್ಯಾಲರಿ ಅನುದಾನ ನೀಡುತ್ತೇವೆ. ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಎಂಜಿನಿಯರಿಂಗ್ ಯೂನಿವರ್ಸಿಟಿಯನ್ನು (UVCE) ಉನ್ನತೀಕರಣಗೊಳಿಸಲು, ಮೂಲಭೂತ ಸೌಕರ್ಯಗಳನ್ನು ಒದಗಿಸಲು 25.00 ಕೋಟಿಗಳ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಮಂಜೂರು ಮಾಡಿದ್ದೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ