ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹುಬ್ಬಳ್ಳಿ, ಜನವರಿ 06: ಧಾರವಾಡ (Dharwad ) ಜಿಲ್ಲೆ ಕುಂದಗೋಳ ( Kundagol ) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿಅಪಘಾತ( Accident ) ಸಂಭವಿಸಿದೆ.
ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಸನದ ಮಣಿಕಂಠ (26), ಪವನ(23), ಚಂದನ (31) ಮತ್ತು ಬೆಂಗಳೂರಿನ ಪ್ರಭು (34) ಮೃತ ದುರ್ದೈವಿಗಳು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ.
Laxmi News 24×7