ಬೆಂಗಳೂರು, ಜನವರಿ 06: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ( Visvesvaraya Museum ) ಇ-ಮೇಲ್ ಮೂಲಕಬಾಂಬ್ ಬೆದರಿಕೆ( Bomb threat ) ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ( Cubbon Park Police Station ) ಇ-ಮೇಲೆ ಬೆದರಿಕೆ ಸಂದೇಶ ಕಳಿಸಿದ್ದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು’Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.
Laxmi News 24×7