Breaking News

ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು

Spread the love

ಬೆಂಗಳೂರು ಜನವರಿ 6: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯರ ತಂಡ ಅವರ ನಿವಾಸಕ್ಕೆ ಆಗಮಿಸಿರುವುದು ತಿಳಿದು ಬಂದಿದೆ. ಡಿಕೆ ಶಿವಕುಮಾರ್‌ ಅವರಿಗೆ ವೈರಲ್ ಫಿವರ್ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಅವರು ರಾತ್ರಿಯಿಂದ ಬಳಲುತ್ತಿದ್ದು ಬೆಳಿಗ್ಗೆ ಅವರ ನಿವಾಸಕ್ಕೆ ವೈದ್ಯರ ತಂಡ ಬಂದು ಅವರ ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕ ಹಾಗೂ ವೈದ್ಯರೂ ಆಗಿರುವ ಕುಣಿಗಲ್ ರಂಗನಾಥ್ ಜೊತೆಗೆ ಆಗಮಿಸಿದ ವೈದ್ಯರು ಡಿಕೆ ಶಿವಕುಮಾರ್ ಅವರನ್ನು ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಸದ್ಯ ಸದಾಶಿವ ನಗರದ ತಮ್ಮ ಮನೆಯಲ್ಲಿ ಇರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ತಿಳಿಸಿದ್ದಾರೆಂದು ತಿಳಿದು ಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಡಿಕೆ ಶಿವಕುಮಾರ್ ಅವರಿಗೆ ವೈರಲ್ ಫಿವರ್ ಕಾಣಿಸಿಕೊಂಡಿತ್ತು. ಹೆಚ್ಚಿನ ಓಡಾಟ, ಪ್ರಚಾರ, ವಿಶ್ರಾಂತಿ ರಹಿತ ಕೆಲಸಗಳಿಂದಾಗಿ ಅವರು ಆರೋಗ್ಯ ಹದಗೆಟ್ಟಿತ್ತು. ಅನಾರೋಗ್ಯದ ನಡುವೆಯೂ ಅವರು ಪ್ರಚಾರದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷ ಗೆಲುವಿಗೆ ತೀವ್ರ ಶ್ರಮಿಸಿದರು.
ಬಳಿಕ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಕೂಡ ಸಾಧಿಸಿ ಅಧಿಕಾರಕ್ಕೆ ಬಂತು. ಸದ್ಯ ಅವರಿಗೆ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತೀವ್ರ ಜ್ವರದಿಂದಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಕನಕಪುರಬಂಡೆಯ ಬೆಂಬಲಿಗರು ಗಾಬರಿಗೊಂಡಿದ್ದಾರೆ. ಆದರೆ ಅವರ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳಿಲ್ಲ, ವೈರಲ್ ಫಿವರ್‌ನಿಂದಾಗಿ ವೈದ್ಯರು ಪರೀಕ್ಷೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷವನ್ನು ಪತ್ತೆ ಗೆಲ್ಲಿಸಲು ಡಿಕೆ ಶಿವಕುಮಾರ್

Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ