ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲ್ಘರ್: ಮಹಾರಾಷ್ಟ್ರದ ಕರಾವಳಿ ಪಾಲ್ಘರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 4.1 ತೀವ್ರತೆಯ ಪ್ರಬಲ ಭೂಕಂಪನ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾತ್ರಿ 9.52ಕ್ಕೆ ಕರಾವಳಿಯಿಂದ 10 ಕಿ.ಮೀ ಆಳದಲ್ಲಿ ಕಂಪನ ಕೇಂದ್ರಿಕೃತವಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ವಿವೇಕಾನಂದ ಕದಂ ಮಾಹಿತಿ ನೀಡಿದ್ದಾರೆ.
ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ವಾರದ ಆರಂಭದಲ್ಲಿ ಜಿಲ್ಲೆಯ ತಲಸರಿ ಪ್ರದೇಶದಲ್ಲಿ ಕಂಪನದ ಅನುಭವವಾಗಿತ್ತು.