Breaking News

ಕರಸೇವಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆ

Spread the love

ಹುಬ್ಬಳ್ಳಿ: ಮೂವತ್ತು ವರ್ಷದ ಹಿಂದಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕರಸೇವಕ,ಆಟೋ ಚಾಲಕ ಶ್ರೀಕಾಂತ ಪೂಜಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ನ್ಯಾಯಾಲಯವು ಷರತ್ತುಬದ್ದ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಬಿಡುಗಡೆಗೊಂಡಿದ್ದಾರೆ‌. ಇಲ್ಲಿನ ಉಪಕಾರಾಗೃಹದಿಂದ ಬಿಡುಗಡೆಗೊಳ್ಳುತ್ತಿದ್ದಂತೆ ಹಿಂದೂ ಕಾರ್ಯಕರ್ತರು ಶ್ರೀರಾಮ ಕೀ ಜೈ ಎಂದು ಘೋಷಣೆ ಕೂಗಿದರು.

ಹಾರ ಹಾಕಿ ಸಹಿ ತಿನ್ನಿಸಿ ಬರಮಾಡಿಕೊಂಡರು‌.

ಬಿಡುಗಡೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ದಶಕಗಳ ಹಿಂದಿನ ಪ್ರಕರವಣನ್ನು ಈ ಸಂದರ್ಭದಲ್ಲಿ ನನ್ನ ಬಂಧಿಸಿದ್ದಾರೆ‌. ನನಗೆ ವಾರಂಟ್, ಸಮನ್ಸ್ ನೀಡದೆ ನನ್ನನ್ನು ಬಂಧಿಸಿದ್ದಾರೆ. ನಾನು ಅಯೋಧ್ಯೆಯ ಶ್ರೀರಾಮನ ದರ್ಶನಕ್ಕೆ ಹೋಗುತ್ತೇನೆ. ನನ್ನ ಎಲ್ಲಾ ಪ್ರಕರಣಗಳು ಖುಲಾಸೆಯಾಗಿವೆ‌. ಆದರೂ ನನ್ನನ್ನು ಬಂಧಿಸಿದ್ದಾರೆ. ನನ್ನ ಬಿಡುಗಡೆಗೆ ಸಹಕರಿಸಿದ ಎಲ್ಲಾ ಹಿಂದೂ ಸಂಘಟನೆಗಳಿಗೆ ಧನ್ಯವಾದ ತಿಳಿಸಿದ ಅವರು, ಬಂಧನ ಮಾಡುವ ದಿನ ಮನೆಗೆ ಬಂದ ಪೊಲೀಸರು ಮಾರುಕಟ್ಟೆಗೆ ಕರೆದುಕೊಂಡು ಹೋಗುವುದಾಗಿ ಕರೆದುಕೊಂಡು ಹೋಗಿ ಜೈಲಿಗೆ ಕಳುಹಿಸಿದರು. ಸರಕಾರ ನನ್ನನ್ನು ಉದ್ದೇಶಪೂರ್ವಕವಾಗಿ ಬಂಧಿಸಿದೆಯೋ ಎಂಬುವುದು ನನಗೆ ಗೊತ್ತಿಲ್ಲ ಎಂದರು.


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Spread the love ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ