ಕೊಪ್ಪಳ, ಜ.6: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಒಂದು ವರ್ಷದ ನಂತರ ಸರ್ಕಾರ ಪತನವಾಗಲಿದೆ, ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ವಿಪಕ್ಷ ಬಿಜೆಪಿ ಹೇಳುತ್ತಲೇ ಇದೆ. ಈ ನಡುವೆ ಮಂತ್ರಿಗಿರಿಗಾಗಿ ಫೈಟ್ ಮಾಡುತ್ತಿದ್ದ ಯಲಬುರ್ಗಾ ಶಾಸಕ, ಸಿಎಂ ಆರ್ಥಿಕ ಸಲಹೆಗಾರಬಸವರಾಜ ರಾಯರೆಡ್ಡಿ(Basavaraj Rayareddy) ಅವರು ಜುಲೈ ತಿಂಗಳಲ್ಲಿ ಸಚಿವ ಸಂಪುಟ ಪುನರ್ರಚನೆಯಾಗುವ ಬಗ್ಗೆ ಸುಳಿವು ನೀಡಿದ್ದು, ಸಚಿವ ಸ್ಥಾನ ಸಿಗುವುದಾಗಿ ಹೇಳಿಕೆ ನೀಡಿದ್ದಾರೆ.
ಸಚಿವ ಸ್ಥಾನ ಸಿಗದ ಹಿನ್ನೆಲೆ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ರಾಯರೆಡ್ಡಿ ಅವರನ್ನು ಇತ್ತೀಚೆಗೆ ಆರ್ಥಿಕ ಸಲಹೆಗಾರರಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಆರ್ಥಿಕ ಸಲಹೆಗಾರರಾಗಿ ನೇಮಕಗೊಂಡ ಬಳಿಕ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ ನಡೆದ ಅಭಿನಂಧನಾ ಕಾರ್ಯಕ್ರಮದಲ್ಲಿ ಬಸವರಾಜ ರಾಯರೆಡ್ಡಿ ಮಾತನಾಡಿದರು.
ಜುಲೈನಲ್ಲಿ ನನ್ನ ಮಂತ್ರಿ ಮಾಡುತ್ತೇನೆ ಎಂದು ಮುಖ್ಯಂಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರಣಾಂತರದಿಂದ ಸದ್ಯಕ್ಕೆ ನನ್ನನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದ್ದಾರೆ. ನಿನ್ನ ಪೈನಾನ್ಸ್ ನೀತಿ ನೋಡಿಕೊಂಡು ಮಂತ್ರಿ ಮಾಡುತ್ತೇನೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.