ಹುಬ್ಬಳ್ಳಿ: ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ (Undeclared Emergency) ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ (Karnataka Politics) ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಇದು ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು.