Breaking News

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ  ಜಾಮೀನು ಮಂಜೂರು ಮಾಡಿದೆ

Spread the love

ನವದೆಹಲಿ: ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ  ಜಾಮೀನು ಮಂಜೂರು ಮಾಡಿದೆ

ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಜಾಮೀನು ಮಂಜೂರು ಮಾಡಿದೆ.  ಈ ವೇಳೆ ಕೋರ್ಟ್‌ 50 ಸಾವಿರ ಶ್ಯೂರಿಟಿ ವಿಧಿಸಿದೆ.

ಮೇ 2018 ರಲ್ಲಿ ಅಲಿಬಾಗ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಅವರ ಆತ್ಮಹತ್ಯೆಗೆ ಅರ್ನಬ್‌  ಗೋಸ್ವಾಮಿ ಪ್ರಚೋದನೆ ನೀಡಿದ್ದರು ಎಂದು ಆರೋಪಿಸಿ ಮಹಾರಾಷ್ಟ್ರ ಪೊಲೀಸರು ಅರ್ನಬ್  ಅವರನ್ನು ಬಂಧಿಸಿದ್ದರು.

ನಾವು ರಿಪಬ್ಲಿಕ್ ಟಿವಿಯನ್ನು ನೋಡುವುದಿಲ್ಲ, ಆದರೆ ಈ ಪ್ರಕರಣದಲ್ಲಿ ಸಾಂವಿಧಾನಿಕ ಕೋರ್ಟ್ ಮಧ್ಯೆ ಪ್ರವೇಶಿಸುವ ಅಗತ್ಯವಿದೆ.ರಾಜ್ಯ ಸರ್ಕಾರಗಳು ಜನರ ವ್ಯಕ್ತಿಗತ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದರೆ ಜನರ ಸ್ವಾತಂತ್ರ್ಯವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ಇರುತ್ತದೆ  ಎಂದು ಕೋರ್ಟ್‌ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿತ್ತು.

ಅರ್ನಬ್ ಗೋಸ್ವಾಮಿಯವರ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಹರೀಶ್ ಸಾಳ್ವೆ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ