ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ…
ಮಣಿಪಾಲ: ರಾಜ್ಯದ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಪರಿಹರಿಸುವುದರ ಜೊತೆಗೆ ರೈತರ ಜೀವನಾಧಾರವಾಗಿರುವ ಕೆಎಂಎಫ್ ನಂದಿನಿ ಸಾಗರೋತ್ತರದಲ್ಲಿಯೂ ಬಹು ಬೇಡಿಕೆ ಪಡೆದುಕೊಳ್ಳುತ್ತಿದೆ ಎಂದು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕೆಎಂಎಫ್)ದ ವ್ಯವಸ್ಥಾಪಕ ನಿರ್ದೇಶಕರಾದ ಎಂ.ಕೆ ಜಗದೀಶ್ ಅವರು ಶನಿವಾರ ಹೇಳಿದ್ದಾರೆ.
ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟ(AAPI)ದ ವತಿಯಿಂದ ಮಣಿಪಾಲದ ಫಾರ್ಚೂನ್ ವ್ಯಾಲಿ ವ್ಯೂ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಜಾಗತಿಕ ಆರೋಗ್ಯ ಶೃಂಗಸಭೆಯ ಎರಡನೇ ದಿನ ನಡೆದ ಸಿಇಒ ಫೋರಂನಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ನೂರಾರು ವೈದ್ಯರ ಸಮಾಗಮದೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತಾದ ವಿಚಾರ ಸಂಕಿರಣದ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಅವರು, ನಂದಿನಿ ಹಾಲಿನ ಉತ್ಪನ್ನಗಳು ಅತ್ಯುತ್ತಮ ಗುಣಮಟ್ಟದ ಜೊತೆಗೆ ಕೈಗೆಟಕುವ ಬೆಲೆಯಲ್ಲಿ ಗ್ರಾಹಕರಿಗೆ ನೀಡುತ್ತಿದೆ. ಪ್ರಸ್ತುತ ನಡೆಯುತ್ತಿರುವ ಈ ಹೆಲ್ತ್ ಸಮ್ಮಿಟ್ನ ವೇದಿಕೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಂದಿನಿ ಬ್ರಾಂಡ್ ಅನ್ನು ವಿಸ್ತರಿಸುವ ಆಶಯವನ್ನು ಕೆಎಂಎಫ್ ಹೊಂದಿದೆ. ಕೆಎಂಎಫ್ ಸಂಸ್ಥೆಯು ನಂದಿನಿ ಹೆಸರಿನಡಿ ಹಲವು ಉತ್ಪನ್ನಗಳನ್ನು ಪರಿಚಯಿಸಿದ್ದು, ಕರ್ನಾಟಕದಾದ್ಯಂತ ಪ್ರತಿನಿತ್ಯ 45 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ.