ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಜಯಪುರ: ವಿಜಯಪುರ ಜಿಲ್ಲೆಯ ಮದಭಾವಿ ಕ್ರಾಸ್ ಬಳಿ ಶನಿವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಂದಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ವೇಗವಾಗಿ ಬಂದ ಎರಡು ಬಸ್ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.