ಬೆಂಗಳೂರು: ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯವಾಗಿದೆ ಎಂದು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 18 ಲಕ್ಷ ಜನರು ಐಟಿ/ಐಟಿಇಎಸ್ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಈಗ, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶಗಳು) ಅಡಿಯಲ್ಲಿ ನೀಡಲಾದ ವಿನಾಯಿತಿಗಳನ್ನು ಕೊನೆಗೊಳಿಸುವ ಮೂಲಕ ಬಹುಪಾಲು ಬಹುರಾಷ್ಟ್ರೀಯ ಕಂಪನಿಗಳನ್ನು ಕಾಯಿದೆ1946ರ ಅಡಿ ತನ್ನ ವ್ಯಾಪ್ತಿಗೆ ತರಲು ರಾಜ್ಯ ಕಾರ್ಮಿಕ ಇಲಾಖೆ ಚಿಂತನೆ ನಡೆಸುತ್ತಿದೆ.
ಐಟಿ/ಐಟಿಇಎಸ್ ಸಂಸ್ಥೆಗಳು ತಮ್ಮ ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.