Breaking News

ಗದಗ: ನಟ ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಯುವಕರು ಸಾವು

Spread the love

ಗದಗ, ಜ.08: ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ  ಮೂವರು ಅಭಿಮಾನಿಗಳು ಮೃತಪಟ್ಟ (Death) ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

 

ಸ್ಯಾಂಡಲ್ ವುಡ್​ನ ರಾಕಿ ಬಾಗ್, ನಟ ಯಶ್​ ಅವರ ಹುಟ್ಟುಹಬ್ಬ ಹಿನ್ನಲೆ ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಸೂರಣಗಿ ಗ್ರಾಮದ ಮೂವರು ಯುವಕರು ಧಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ತ

ಮ್ಮ ಇಷ್ಟದ ನಟನ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಮಾಡಬೇಕೆಂದು ತಡರಾತ್ರಿ ನಟ ಯಶ್​ನ ಹುಟ್ಟುಹಬ್ಬದ ಬ್ಯಾನರ್ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಈಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.

ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ವಿದ್ಯುತ್ ತಗಲುತ್ತಿದ್ದಂತೆ ಕೂಗಾಟ ಚಿರಾಟ ಕೇಳಿ ಬಂದಿದ್ದು ಘಟನೆಯ ಲೈವ್ ವಿಡಿಯೋ ದೃಶ್ಯ ನೋಡಿದ್ರೆ ಎದೆಝಲ್ ಎನ್ನುವಂತಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ