ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಕೃಷ್ಣಪ್ಪನ ಕೊಪ್ಪಲು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚನ್ನಪಟ್ಟಣ ಮೂಲದ ಅಮಾನುಲ್ಲಾ ಖಾನ್(60) ಮುನಾವರ್(50) ಮೃತ ದುರ್ದೈವಿಗಳು. ಅಪರಿಚಿತ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.