ಉಪ ತಹಶೀಲ್ದಾರ್ ಕಿರುಕುಳ ಆರೋಪ ಕೇಳಿ ಬಂದಿದ್ದು ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿದ್ದ ವಿಕಲಚೇತನ ಪರಮೇಶ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಉಪ ತಹಶೀಲ್ದಾರ್ ಶಿವಕುಮಾರ್ ವಿರುದ್ದ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿರುಕುಳ ಆರೋಪ ಮಾಡಿ ವಿಷ ಕುಡಿದು ವಿಕಲಚೇತನ ಪರಮೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಪರಮೇಶ್ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಮೃತಪಟ್ಟಿದ್ದಾರೆ.
ವಿಕಲಚೇತನನಾಗಿದ್ದರೂ ಕನಿಕರ ತೋರಿಸದೆ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ನನ್ನ ಸಾವಿಗೆ ಉಪ ತಹಶೀಲ್ದಾರ್ ಶಿವಕುಮಾರ್ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆಯಲಾಗಿದೆ. ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.